ಬಂಟ್ವಾಳ, ಜೂ 11 (DaijiworldNews/HR): ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿ ನಡೆದಿದೆ.
ಮಂಗಳೂರು ತಾಲೂಕು ಯಯ್ಯಾಡಿ ಗ್ರಾಮದ ಕೊಂಚಾಡಿ ಸುರೇಶ್ ಚೌಟ ರವರ ಪುತ್ರಿ ಪ್ರೀತಿ ಶೆಟ್ಟಿ(37) ಮೃತಪಟ್ಟವರು.
ಪ್ರೀತಿ ಶೆಟ್ಟಿಯವರು ವಿವಾಹಿತರಾಗಿದ್ದು, ತನ್ನ ಮಗುವನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಅವರು ಜೂ.9ರಂದು ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿರುವ ಮನೆಯಲ್ಲಿ ಯಾವುದೋ ವಿಷ ಪದಾರ್ಥವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಮನೆಯವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಜೂ.10ರಂದು ಮೃತಪಟ್ಟಿದ್ದಾರೆ ಎಂದು ಪ್ರೀತಿ ಶೆಟ್ಟಿಯವರ ತಂದೆ ಸುರೇಶ್ ಚೌಟರವರು ವಿಟ್ಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821