ಮಂಗಳೂರು, ಜೂ 12 (DaijiworldNews/MS): ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ 83 ರೌಡಿ ಶೀಟರ್ಗಳ ಮನೆಗಳಲ್ಲಿ ಪೊಲೀಸರು ಜೂ.11ರ ಭಾನುವಾರ ದಿಢೀರ್ ತಪಾಸಣೆ ನಡೆಸಿದ್ದಾರೆ.
ಅಕ್ರಮ ಆಯುಧಗಳ ಬಗ್ಗೆ ಶೋಧ ನಡೆಸಿ ಯಾವುದೇ ರೌಡಿ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ತಪಾಸಣೆ ವೇಳೆ ಯಾವುದೇ ಅಯುಧಗಳು ಪತ್ತೆಯಾಗಿಲ್ಲ. ಪೊಲೀಸ್ ಇಲಾಖೆ ಆಗಾಗ್ಗೆ ಇಂತಹ ತಪಾಸಣೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಇದರಿಂದಾಗಿ ರೌಡಿಗಳ ಮೇಲೆ ನಿರಂತರ ನಿಗಾ ಸಾಧ್ಯವಾಗುತ್ತದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲೂ 148 ಮಂದಿ ರೌಡಿ ಶೀಟರ್, ಹಳೆ ಆರೋಪಿಗಳನ್ನು ತಪಸೆಣೆಗೊಳಪಡಿಸಲಾಗಿದೆ.