ಕುಂದಾಪುರ, ಜೂ 12 (DaijiworldNews/MS): ರಸ್ತೆ ಬದಿಯಲ್ಲಿ ನಿಂತಿದ್ದ ಪಾದಾಚಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತ್ರಾಸಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮೃತರನ್ನು ಸಾಸ್ತಾನ ಮೂಲದ ರಾಜು ಪೂಜಾರಿ ಎಂದು ಗುರುತಿಸಲಾಗಿದೆ.
ರಾಜು ಪೂಜಾರಿ ಭಾನುವಾರ ರಾತ್ರಿ ತ್ರಾಸಿಯ ಪೆಟ್ರೋಲ್ ಬಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆಯ ಡಿವೈಡರ್ ಬಳಿ ರಸ್ತೆಯ ಅಂಚಿನಲ್ಲಿ ರಾಜು ಪೂಜಾರಿ ರಸ್ತೆ ದಾಟಲು ನಿಂತಿದ್ದರು. ಇದೇ ಸಂದರ್ಭ ಕುಂದಾಪುರ ಕಡೆಯಿಂದ ಬೈಂದೂರಿನತ್ತ ಪ್ರಯಾಣಿಸುತ್ತಿದ್ದ ಬಸ್ಸು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಾಜು ಪೂಜಾರಿ ರಸ್ತೆಗೆ ಬಿದ್ದು ತಲೆಯ ಹಿಂಭಾಗಕ್ಕೆ ಗಂಭೀರ ಏಟಾಗಿದ್ದು, ಎರಡು ಕಾಲಿನ ಮೂಳೆ ಮುರಿದು ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರಾದ ಪ್ರವೀಣ್ ಒಲಿವೆರಾ, ಲಿಪ್ಟನ್ ಒಲಿವೆರಾ, ದೇವರಾಜ್ ಕೊಠಾರಿ ಮೊದಲಾದವರು ಗಂಗೊಳ್ಳಿ 24*7 ಆಪತ್ಪಾಂಧವ ಅಂಬ್ಯುಲೆನ್ಸ್ನಲ್ಲಿ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲು ಸಹಕರಿಸಿದರು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.