ರಾಜ್ಯದಲ್ಲಿ ವಿವಾದಿತ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ನಿರಾಕರಿಸಿದೆ. ಕಾರಣ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಇನ್ನೇನು ಮೂರು ದಿನ ಬಾಕಿ ಇರೋವಾಗ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಪಿಐಎಲ್'ನ್ನು ನ್ಯಾಯಾಲಯದ ವಜಾಗೊಳಿಸಿದೆ.
ಸರ್ಕಾರದ ವತಿಯಿಂದ ನ.10 ರಂದು ರಾಜ್ಯದ್ಯಂತ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುವ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ.24 ರಂದು ಹೊರಡಿಸಿರುವ ಸುತ್ತೋಲೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಾಲಯ ಈ ತೀರ್ಪು ನೀಡಿದ್ದು ಈ ಬಗ್ಗೆ ತಕರಾರು ಇದ್ದಲ್ಲಿ ತಿಂಗಳ ಬಳಿಕ ಮತ್ತೆ ಅರ್ಜಿ ಸಲ್ಲಿಸಲು ಪೀಠ ಅರ್ಜಿದಾರರಾದ ಕೊಡಗಿನ ಕೆಪಿ ಮಂಜುನಾಥ್ ಅವರಿಗೆ ಸೂಚನೆ ನೀಡಿದೆ.