ಮಂಗಳೂರು, ಜೂ 17 (DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಯಾವುದೇ ಸರ್ಕಾರಿ ಕಾರ್ಯಕ್ರಮಗಳು, ಸಭೆ, ಸಮಾರಂಭಗಳಲ್ಲಿ ಹಾರ, ಹೂ ಗುಚ್ಚಗಳನ್ನು ನೀಡುವುದರ ಬದಲು ಪುಸ್ತಕ ನೀಡುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಹೂ ಗುಚ್ಚಗಳನ್ನು ನೀಡುವ ಬದಲು ಇಚ್ಚೆ ಇರುವವರು ಉಡುಗೂರೆ ರೂಪದಲ್ಲಿ ಪುಸ್ತಕಗಳನ್ನು ನೀಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿರುವುದಾಗಿ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.