ಬಂಟ್ವಾಳ, ಜೂ 17 (DaijiworldNews/HR): ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ.
ಇರ್ಷಾದ್ ಉಮರ್(33 ವ.)ಮೃತ ಯುವಕ.
ಉಮ್ಮಾರ್ ರವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. ಇಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.