ಮಂಗಳೂರು, ಜೂ 20 (DaijiworldNews/MS): ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರನ್ನು ಅಧಿಕಾರಿಗಳು ಭೇಟಿ ಮಾಡುವ ಸಂದರ್ಭದಲ್ಲಿ ಹಾಗೂ ಜಿಲ್ಲಾಧಿಕಾರಿ ಭಾಗವಹಿಸುವ ಯಾವುದೇ ಸರಕಾರಿ, ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಹಾರ/ ಹೂಗುಚ್ಛ ನೀಡುವುದನ್ನು ನಿಷೇಧಿಸಲಾಗಿದೆ.
ಹೂಗುಚ್ಛ ನೀಡುವ ಆಸಕ್ತಿ ಇರುವವರು ಅದರ ಬದಲಿಗೆ ಪುಸ್ತಕ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿರುವುದಾಗಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.