ಮಂಗಳೂರು, ಜೂ 21 (DaijiworldNews/MS): ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾದ ಘಟನೆ ನಗರ ಹೊರವಲಯದ ಪಾಲ್ದಾನೆ ಬಳಿ ಮಂಗಳವಾರ ನಡೆದಿದೆ.
ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಎಸೆಸೆಲ್ಸಿ ಕಲಿಯುತ್ತಿದ್ದ ಈಕೆ ಮಂಗಳವಾರ ಸಂಜೆ ಶಾಲೆಯಿಂದ ಬಂದ ಬಳಿಕ ಕ್ಷುಲ್ಲಕ ಕಾರಣಕ್ಕೆ ಮನೆಯವರ ಜತೆ ಜಗಳ ಮಾಡಿದ್ದಳು ಎನ್ನಲಾಗಿದೆ. ಅದೇ ಕೋಪದಿಂದ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821