ಮಂಗಳೂರು, ಜೂ 26 (DaijiworldNews/MS): ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರಕ್ಕೆ ಕುಡಿಯುವ ನೀರು ಪೂರೈಸುವ ನೇತ್ರಾವತಿ ನದಿಗೆ ಅಡ್ಡಲಾಗಿರುವ ತುಂಬೆ ಅಣೆಕಟ್ಟಿನ ನೀರಿನ ಮಟ್ಟ ಏರಿಕೆಯಾಗಿದೆ.
ತುಂಬೆ ವೆಂಟೆಡ್ ಡ್ಯಾಂ ನಲ್ಲಿ 5 ಮೀ. ನೀರಿನಮಟ್ಟ ಕಾಯ್ದುಕೊಳ್ಳಲಾಗುತ್ತಿದ್ದು, ಸದ್ಯ ಮ ಮಂಗಳೂರು ನಗರಕ್ಕೆ ಕುಡಿಯುವ ನೀರಿನ ಅಭಾವ ದೂರವಾಗಿದೆ.
ನೀರಿನ ಅಭಾವ ಹಿನ್ನಲೆಯಲ್ಲಿಮಂಗಳೂರಿನಲ್ಲಿ ಮೇ.4 ರಿಂದ ನೀರಿನ ರೇಷನಿಂಗ್ ಆರಂಭ ಮಾಡಲಾಗಿತ್ತು. ಮಂಗಳೂರು ನಗರ ಪ್ರದೇಶ , ಸುರತ್ಕಲ್ ಪ್ರದೇಶಕ್ಕೆ ಪರ್ಯಾಯ ದಿನಗಳಲ್ಲಿ ಕುಡಿಯುವ ನೀರು ಸರಬರಾಜು ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದರು.