ಪುತ್ತೂರು, ಜೂ 27 (DaijiworldNews/HR): ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿಯ ಪಡಂಗಡಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ನಿವಾಸಕ್ಕೆ ಎನ್.ಐ.ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇನ್ನು ದಾಳಿ ವೇಳೆ ನೌಷದ್ ಮನೆಯಲ್ಲಿರಲ್ಲಿಲ್ಲ ಎನ್ನಲಾಗಿದ್ದು, ಅಧಿಕಾರಿಗಳು ಎನ್.ಐ.ಎ ಕಚೇರಿಗೆ ಹಾಜರಾಗುವಂತೆ ನೌಷದ್ ಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಸೋಮವಾರ್ ಪೇಟೆಯಲ್ಲಿ ಕೂಡ ಎನ್ಐಎ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.