ಉಳ್ಳಾಲ, ಜೂ 27 (DaijiworldNews/SM): ನಿರ್ಮಾಣ ಹಂತದಲ್ಲಿರುವ ಮನೆಯ ಗೋಡೆ ಕುಸಿದಿರುವ ಘಟನೆ ಕುಂಪಲ ಮೂರುಕಟ್ಟ ಬಲ್ಯ ಪ್ರದೇಶದಲ್ಲಿ ಸಂಭವಿಸಿದೆ.
ಧರ್ಮೇಶ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಕಳೆದ ಒಂದು ತಿಂಗಳಿನಿಂದ ಬ್ಯಾಂಕ್ ಸಾಲ ಪಡೆದು ಮನೆ ನಿರ್ಮಾಣದ ಕಾಮಗಾರಿ ಕೈಗೊಂಡಿದ್ದರು. ಇಂದು ಬೆಳಿಗ್ಗೆ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಗೋಡೆ ಕುಸಿದಿದೆ. ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಘಟನಾ ಸ್ಥಳಕ್ಕೆ ಜಿ.ಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಭೇಟಿ ನೀಡಿದರು. ಈ ವೇಳೆ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಡಿ, ಬಿಜೆಪಿ ಮಂಡಲ ಉಪಾಧ್ಯಕ್ಷ ಯಶವಂತ್ ಅಮೀನ್, ಪುರಸಭೆ ಮಾಜಿ ಸದಸ್ಯರಾದ ಹರೀಶ್ ಕುಂಪಲ, ಕಿಶೋರ್ ಡಿಕೆ, ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯ ಪ್ರವೀಣ್ ಬಗಂಬಿಲ, ನಾಗೇಶ್ ಕುಂಪಲ, ಓಂ ಪ್ರಕಾಶ್ ಹಾಗೂ ಸಂಪತ್ ಕುಕ್ಯಾನ್ ಉಪಸ್ಥಿತರಿದ್ದರು.