ಮಂಗಳೂರು, ಏ 01 (MSP): ಎಲ್ಲಾ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ಮೋದಿ ಸರ್ಕಾರ ದೇಶಕ್ಕೆ ಅನಿವಾರ್ಯವಾಗಿದೆ ಎಂದು ರಾಜ್ಯ ಬಿಜೆಪಿಯ ಸಹ ವಕ್ತಾರ ಅನ್ವರ್ ಮಾಣಿಪ್ಪಾಡಿ ಹೇಳಿದ್ದಾರೆ.
ಅವರು ಏ.2 ರ ಮಂಗಳವಾರ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ
ಮಾತನಾಡಿದ್ರು. ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬಂದ ಬಳಿಕ ದೇಶದ ಸಂಪೂರ್ಣ ಚಿತ್ರಣ ಬದಲಾಗಿದೆ. ಭಾರತವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿವಂತೆ ಮಾಡಿದ್ದಾರೆ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಸಹಿತ ಎಲ್ಲರೂ ಮೋದಿ ಸರ್ಕಾರಕ್ಕೆ ಮತ್ತೆ ಅಧಿಕಾರ ನೀಡುವತ್ತ ಕೈ ಜೋಡಿಸಿಬೇಕು ಎಂದು ಕರೆ ನೀಡಿದರು.
ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ವಕ್ಫ್ ಆಸ್ತಿಗಳ ಅತಿಕ್ರಮಣವಾಗಿದೆ. ಈ ಬಗ್ಗೆ ನಾನು ವರದಿ ನೀಡಿದ್ದು ಇದರ ಆಧಾರದಲ್ಲಿ ಸುಪ್ರೀಂ ಕೋರ್ಟ್ ವಕ್ಪ್ ಆಸ್ತಿ ವಶಕ್ಕೆ ಆದೇಶ ಹೊರಡಿಸಿದೆ. ಆದರೂ ಕೂಡಾ ರಾಜ್ಯದಲ್ಲಿ ಆಡಳಿತದಲ್ಲಿರುವ ದೋಸ್ತಿ ಸರ್ಕಾರ ಅವುಗಳನ್ನು ಮರಳಿ ಪಡೆಯಲು ಯತ್ನಿಸುತ್ತಿಲ್ಲ. ಅತಿಕ್ರಮಣ ಮಾಡಿದ ಪ್ರಮುಖರಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷದಲ್ಲಿರುವ ಮುಸ್ಲಿಂ ನಾಯಕರುಗಳಿದ್ದಾರೆ ಎನ್ನುವುದು ವಿಪರ್ಯಾಸ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಪಕ್ಷದ ಮುಖಂಡರಾದ ಮೋನಪ್ಪ ಭಂಡಾರಿ, ಸಂತೋಷ್ ಕುಮಾರ್ ರೈ ಬೋಳಿಯಾರು, ರಾಮಚಂದರ್ ಬೈಕಂಪಾಡಿ, ಸಾಮಾಜಿಕ ಜಾಲತಾಣಗಳ ಜಿಲ್ಲಾ ಸಂಚಾಲಕ ಸೂರಜ್ ಉಪಸ್ಥಿತರಿದ್ದರು