ಕಾಸರಗೋಡು, ಜು 4 (DaijiworldNews/SM): ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ಅವವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಸರಗೋಡಿನಿಂದ ಹೊಸಂಗಡಿ ತನಕ ರಾಷ್ಟೀಯ ಹೆದ್ದಾರಿ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿದರು. ಮೊಗ್ರಾಲ್, ಕೊಪ್ರ ಬಜಾರ್, ಆರಿಕ್ಕಾಡಿ, ಶಿರಿಯ, ಹೊಸಂಗಡಿ ಮೊದಲಾದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾರೀ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು ರಸ್ತೆಗಳನ್ನು ತಪ್ಪಿಸುವಂತೆ ಸೂಚನೆ ನೀಡಲಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸಂಚಾರವನ್ನು ಆದಷ್ಟು ತಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸೋಮವಾರ ಚೆಂಗಳದಿಂದ ಕಾಞಂಗಾಡುವರೆಗಿನ ರಸ್ತೆಯನ್ನು ಪರಿಶೀಲಿಸಿ ಸಮಸ್ಯೆ ಬಗೆಹರಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು.