ಮಂಗಳೂರು, ಜು 4 (DaijiworldNews/AK):ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಅರೆಂಜ್ ಅಲರ್ಟ್ ಮುಂದುವರಿದಿದ್ದು, ಬಿರುಗಾಳಿ ಸಹಿತ ಮಳೆಯಾಗುವ ನಡುವೆ ಕಡಲು ಪ್ರಕ್ಷುಬ್ದಗೊಂಡು ಬೃಹತ್ ಗಾತ್ರದ ಅಲೆಗಳು ಕಡಲ ತೀರಕ್ಕೆ ಅಪ್ಪಳಿಸುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಜು. ೬ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡದ ಮಂಗಳೂರಿನಿಂದ ಉತ್ತರ ಕನ್ನಡದ ಕಾರವಾರದವರೆಗೆ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಆರ್ಭಟಿಸಲಿದ್ದು, 4.3 ಮೀಟರ್ಗಿಂತಲೂ ಹೆಚ್ಚು ಎತ್ತರದವರೆಗೆ ಅಲೆ ಏಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಡಲ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಸಮುದ್ರ ಅಲೆಗಳ ಅಬ್ಬರ ಜೋರಾಗಿರುವುದರಿಂದ ನಾಗರಿಕರು ನೀರಿಗೆ ಇಳಿಯುವುದನ್ನು ನಿರ್ಬಂಧಿಸಲಾಗಿದೆ
ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಆರಂಜ್ ಅಲರ್ಟ್ಎಚ್ಚರಿಕೆ ಇದ್ದು, ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರಂಜ್ ಅಲರ್ಟ್ ಇದ್ದು ಉಳಿದಂತೆ ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.