ಕಾಸರಗೋಡು, ಜು 05 (DaijiworldNews/SM): ಸತತವಾಗಿ ಮಳೆ ಅಬ್ಬರ ಮುಂದುವರಿದಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ನಾಳೆಯೂ(ಜು.6) ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಹಲವೆಡೆ ಜಲಾವೃತ ಗೊಂಡಿದ್ದು , ಗುಡ್ಡ ಕುಸಿತ ಪ್ರವಾಹ ಸ್ಥಿತಿ ಉಂಟಾಗಿದೆ. ನಾಲ್ಕು ದಿನಗಳಿಂದ ಗಾಳಿ ,ಮಳೆ ಅಬ್ಬರಕ್ಕೆ ಜಿಲ್ಲೆ ನಲುಗಿದ್ದು , ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಆದರೆ ಪೂರ್ವ ನಿಗಧಿತ ಪರೀಕ್ಷೆಗಳಲ್ಲಿ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ