ಮಂಗಳೂರು, ಜು 6 (DaijiworldNews/MS):ಜಿಲ್ಲೆಯಲ್ಲಿ ನಿರಂತರವಾಗಿ ಗಾಳಿ ಸಹಿತ ಮಳೆಯಾಗುತ್ತಿದ್ದು, ಅಲ್ಲಲ್ಲಿ ವಿಕೋಪಗಳು ಸಂಭವಿಸುತ್ತಿದೆ. ಹೀಗಾಗಿ ಸೂಕ್ತ ರಕ್ಷಣಾ ಕಾರ್ಯಾಚರಣೆ ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಹೋರ್ಡಿಂಗ್, ಫ್ಲೆಕ್ಸ್ ಗಳನ್ನು ತಕ್ಷಣ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.
ನಗರದಲ್ಲಿ ಗುರುವಾರ ಸುರಿದ ಗಾಳಿ ಮಳೆಗೆ ಬಿಕರ್ನಕಟ್ಟೆ ಬಳಿ ಹೋರ್ಡಿಂಗ್ ಬಿದ್ದು ಹಲವಾರು ದ್ವಿಚಕ್ರ ವಾಹನಗಳು ಜಖಂಗೊಂಡಿತ್ತು. ಇಂದು ತಲಪಾಡಿಯ ಬಳಿಯ ಖಾಸಗಿ ಕಾಲೇಜಿನ ಮೇಲ್ಛಾವಣಿ ಕುಸಿದು ಬಿದ್ದಿದ್ದು ಕಾಲೇಜಿಗೆ ರಜೆ ಘೋಷಣೆಯಾಗಿರುವುದರಿಂದ ಆದರೆ ಯಾವುದೇ ಪ್ರಾಣಾಪಾಯವಾಗುವ ಅನಾಹುತ ತಪ್ಪಿದೆ.
ಹೀಗಾಗಿ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ದೃಷ್ಟಿಯಿಂದ ಜಿಲ್ಲೆಯ ರಸ್ತೆ ಬದಿಗಳಲ್ಲಿ ಅಳವಡಿಸಿರುವ ಅಪಾಯಕಾರಿ ಫ್ಲೆಕ್ಸ್, ಹೋರ್ಡಿಂಗ್ ಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತೆರವು ಮಾಡಬೇಕೆಂದು ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.