ಬಂಟ್ವಾಳ, ಜು 7 (DaijiworldNews/MS): ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪುಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.
ಮಣ್ಣಿನೊಳಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮಾಡಿದ ಸತತ ಪ್ರಯತ್ನ ವಿಫಲವಾಗಿದೆ.
ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(47) ಹಾಗೂ ಶಫಾ(20) ಮನೆಯಡಿಯಲ್ಲಿ ಸಿಲುಕಿ ಹಾಕಿಕೊಂಡವರು. ಅವರಲ್ಲಿ ಸಫಾ ಅವರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ.
ಉಳಿದಂತೆ ಝರಿನಾ ಅವರು ಮೃತಪಟ್ಟಿದ್ದಾರೆ. ಕೆಲವು ಗಂಟೆಗಳ ಕಾಲ ರಕ್ಷಣಾ ಕಾರ್ಯ ದಲ್ಲಿ ಸ್ಥಳೀಯರು ತೊಡಗಿದ್ದರು.ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬಂದಿ ಸ್ಥಳದಲ್ಲಿ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳದಲ್ಲಿದ್ದಾರೆ.
ಬಂಟ್ವಾಳ ತಾಲೂಕಿನಲ್ಲಿ ಇಂತಹ ದುರ್ಘಟನೆಗಳು ಅನೇನ ಕಡೆ ಸಂಭವಿಸುವ ಬಗ್ಗೆ ಅನೇಕ ವರದಿಗಳು ಮಾಡಿದರು ಕೂಡ ಜಿಲ್ಲಾಧಿಕಾರಿಯಾಗಲಿ, ಸಿ.ಎಸ್. ತಾಲೂಕು ಆಡಳಿತವಾಗಲಿ,ತಾ.ಪಂ.ಇ.ಒ.ಆಗಲಿ, ಪಿ.ಡಿ.ಒ.ಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಯಾವುದೇ ಸ್ಪಂದನೆಗಳನ್ನು ನೀಡುತ್ತಿಲ್ಲ.
ಮನೆಮಂದಿ ದೂರು ನೀಡಿದರು ಬೇರೆ ಬೇರೆ ಕಾರಣಗಳನ್ನು ನೀಡಿ ಅಧಿಕಾರಿಗಳು ತಪ್ಪಿಸಿಕೊಳ್ಳುವ ಬಗ್ಗೆ ದೂರುದಾರರು ಆರೋಪ ಮಾಡಿದ್ದಾರೆ. ತಾಲೂಕಿನಲ್ಲಿ ಅನೇಕ ಕಡೆಗಳಲ್ಲಿ ಮನೆ ಕುಸಿಯುವ ಮತ್ತು ಗುಡ್ಡ ಕುಸಿದು ಮನೆಗೆ ಹಾನಿಯಾಗುವ ಸಂಭವವು ಹೆಚ್ಚಿದ್ದು ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ.
ಹಿಂದಿನ ವರದಿ:
ಬಂಟ್ವಾಳ, ಜು 7 (DaijiworldNews/MS): ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪು ಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವ ಮಹಿಳೆಯ ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ.
ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(49) ಹಾಗೂ ಶಫಾ(20) ಮನೆಯಡಿಯಲ್ಲಿ ಸಿಲುಕಿ ಹಾಕಿಕೊಂಡವರು. ಅವರಲ್ಲಿ ಸಫಾ ಅವರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ.
ಉಳಿದಂತೆ ಝರಿನಾ ಅವರ ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು, ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬಂದಿ ಸ್ಥಳದಲ್ಲಿ ಉಪಸ್ಥಿತರಿದ್ದಾರೆ. ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳದಲ್ಲಿದ್ದಾರೆ.