ಉಡುಪಿ, ಜು 09 (DaijiworldNews/AK) ರಾಜ್ಯದಲ್ಲಿ ಪ್ರಥಮವಾಗಿ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಉಡುಪಿ ಜಿಲ್ಲಾ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖಾ ನೌಕರರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ 31 ಜಿಲ್ಲೆಗಳಲ್ಲಿಯೇ ಪ್ರಥಮವಾಗಿ ಈ ಸೊಸೈಟಿ ಆರಂಭವಾಗಿದೆ. ಇದು ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ನೌಕರರ ಆರ್ಥಿಕ ಸದೃಢತೆ, ಒಗ್ಗಟ್ಟನ್ನು ವೃದ್ದಿಸಲಿ ಎಂದರು.
ಉಡುಪಿ ಜಿಲ್ಲೆಯ ಧಾರ್ಮಿಕ ಮುಖಂಡರಾದ ಬಿ.ಅಪ್ಪಣ್ಣ ಹೆಗ್ಡೆ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ವೇಳೆ ಷೇರುಪತ್ರ, ಠೇವಣಿ ಪತ್ರ, ಸಂಘದ ಗುರುತು ಪತ್ರವನ್ನು ವಿತರಿಸಲಾಯಿತು.
ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ ನೂತನ ಕಛೇರಿಗೆ ಆಗಮಿಸಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಧಾರ್ಮಿಕ ಮುಖಂಡರಾದ ಬಿ.ಅಪ್ಪಣ್ಣ ಹೆಗ್ಡೆ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ರಾಜು ಪೂಜಾರಿ, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ, ಕುಂದಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭಾರತಿ ಎನ್, ಬ್ರಹ್ಮಾವರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ವಿ.ಇಬ್ರಾಹೀಂಪುರ್, ಪಂಚಾಯಿತಿ ನೌಕರರ ಶ್ರೇಯೋಭಿವೃದ್ದಿ ಸಂಘದ ಅಧ್ಯಕ್ಷರಾದ ಮಂಜುನಾಥ ಶೆಟ್ಟಿ, ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ವಿಕಾಸ್ ಹೆಗ್ಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖಾ ನೌಕರರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂದಾಪುರ ಇದರ ಅಧ್ಯಕ್ಷರಾದ ಸಂತೋಷ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥೆಯ ನಿರ್ದೇಶಕರಾದ ಜಯರಾಮ ಶೆಟ್ಟಿ, ಉಮೇಶ್, ಗುರುಮೂರ್ತಿ, ಶೇಖರ್, ಶ್ರೀಮತಿ ದೀಪಾ, ಶ್ರೀಮತಿ ರೂಪಾ ಗೋಪಿ, ಉದಯ ಕುಮಾರ್, ಉದಯ ಮಡಿವಾಳ, ವಿಜೇಂದ್ರ ಎಂ., ವಾಸು ನಾಯ್ಕ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ಚಂದ್ರಕಾಂತ್ ಬಿಲ್ಲವ ಸ್ವಾಗತಿಸಿದರು. ನಾಗೇಂದ್ರ ಕುಮಾರ್ ಪ್ರಾರ್ಥನೆ ನೆರವೇರಿಸಿದರು. ಮಹೇಶ್ ಮತ್ತು ರೂಪಾ ಕಾರ್ಯಕ್ರಮ ನಿರ್ವಹಿಸಿದರು. ನಿರ್ದೇಶಕರಾದ ನಾಗೇಂದ್ರ ವಂದಿಸಿದರು.