ಮಂಗಳೂರು, ಜು 11 (DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಗೆ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿ ನಿಯುಕ್ತಿಗೊಂಡಿರುವ ಮುಕುಲ್ ಚೈನ್ ಅವರು ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರೊಬೇಷನರಿ ಅಧಿಕಾರಿಯನ್ನು ಸ್ವಾಗತಿಸಿ, ಅವರ ಕರ್ತವ್ಯಗಳ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
2022ರ ಕರ್ನಾಟಕ ಕೆಡರ್ ನ ಐಎಎಸ್ ಅಧಿಕಾರಿಯಾಗಿರುವ ಮುಕುಲ್ ಜೈನ್ ಮೂಲತಃ ರಾಜಸ್ಥಾನದ ಆಲ್ವಾರ್ ನವರು. ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿ ಟೆಕ್ ಪದವಿ ಪಡೆದಿದ್ದಾರೆ. ಅವರು 2021ರ ಬ್ಯಾಚ್ ನ ಭಾರತೀಯ ಅರಣ್ಯ ಇಲಾಖೆಯ ಅಧಿಕಾರಿಯಾಗಿದ್ದರು.