ಉಪ್ಪಿನಂಗಡಿ, ಜು 12 (DaijiworldNews/AK) ಉಪ್ಪಿನಂಗಡಿ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷ್ಣಪ್ಪ ನಾಯ್ಕ ಅವರು, ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.
ಅವರು ಮಾಣಿ ಸಮೀಪದ ನೇರಳಕಟ್ಟೆ ನಿವಾಸಿ. ಕೃಷ್ಣಪ್ಪ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸುಮಾರು 6 ವರ್ಷಗಳಿಂದ ಕರ್ತವ್ಯ ನಿರ್ವಹಿಸಿಕೊಂಡಿದ್ದರು.
ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದಾಗಿ ರಜೆಯಲ್ಲಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ 26 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಕೃಷ್ಣಪ್ಪ ರವರು, ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.