ಬಂಟ್ವಾಳ, ಜು 14 (DaijiworldNews/SM): ಕ್ಯೂ ನಿಲ್ಲುವ ವಿಚಾರದಲ್ಲಿ ರಿಕ್ಷಾ ಚಾಲಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆಯನ್ನು ನಿಲ್ಲಿಸಲು ಸ್ಥಳಕ್ಕೆ ಬಂದಿದ್ದ ಸ್ಥಳೀಯ ಪುರಸಭಾ ಸದಸ್ಯನಿಗೆ ಗಾಯವಾಗಿದ್ದು, ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಚದುರಿಸಲು ಪೋಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಬಿಸಿರೋಡಿನ ಕೈಕಂಬದಲ್ಲಿ ನಡೆದಿದೆ.
ಘಟನೆಯ ವಿವರ
ಬಿಸಿರೋಡಿನ ಕೈಕಂಬದಲ್ಲಿ ರಿಕ್ಷಾ ಕ್ಯೂ ನ ವಿಚಾರಕ್ಕೆ ಸಂಬಂಧಿಸಿದಂತೆ ರಿಕ್ಷಾ ಯೂನಿಯನ್ ಪ್ರಮುಖನ ಮೇಲೆ ಒಂದು ಗುಂಪು ಹಲ್ಲೆ ನಡೆಸಿದೆ.ಪ್ರತಿಯಾಗಿ ಹಲ್ಲೆ ನಡೆಸಿದ ಗುಂಪಿನ ಮೇಲೆ ರಿಕ್ಷಾ ಯೂನಿಯನ್ ನ ಪ್ರಮುಖನ ಗುಂಪು ಹಲ್ಲೆ ನಡೆಸಲು ಮುಂದಾದಾಗ ಎರಡು ಗುಂಪುಗಳ ನಡುವೆ ನಡೆಯುವ ಗಲಾಟೆಯನ್ನು ನಿಲ್ಲಿಸಲು ಸ್ಥಳೀಯ ಪುರಸಭಾ ಸದಸ್ಯ ಹಸೈನರ್ ಗುಂಪಿನ ಮಧ್ಯ ಬಂದಾಗ ಇವರ ಮೇಲೆ ಗಾಯವಾಗಿದೆ.
ಗಾಯವಾಗಿರುವ ಹಸೈನರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೋಲೀಸರು ಆಗಮಿಸಿದ್ದು, ಎರಡು ಗುಂಪುಗಳನ್ನು ಚದರಿಸಲು ಲಾಠಿ ಬೀಸಿದ್ದಾರೆ. ಸದ್ಯ ಯಾವುದೇ ರೀತಿಯ ಗೊಂದಲಗಳಿಲ್ಲ. ಎರಡು ಗುಂಪಿನ ಸದಸ್ಯರು ಸ್ಥಳದಿಂದ ಕಾಲ್ಕಿತ್ತಿದ್ದು, ಪರಿಸ್ಥಿತಿ ತಿಳಿಯಾಗಿದೆ.
ಪೋಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಕರಣ ದಾಖಲಾದರೆ ಸ್ಪಷ್ಟವಾದ ಕಾರಣ ಸಿಗಬಹುದು.