ಕಾರ್ಕಳ,ಜು 16 (DaijiworldNews/MS): ಕಾರ್ಕಳ ಪೊಲೀಸ್ ಠಾಣಾ ಸಿಬ್ಬಂದಿ ನೇಣಿಗೆ ಶರಣಾದ ಘಟನೆ ಮಿಯಾರ್ ಗ್ರಾಮದಲ್ಲಿ ನಡೆದಿದೆ.
ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಹಲವು ದಿನಗಳಿಂದ ರಜೆ ನಿಮಿತ್ತ ಮನೆಯಲ್ಲಿದ್ದರು. ಈ ಘಟನೆ ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821