ಮಂಗಳೂರು, ಜು 17 (DaijiworldNews/HR): ಪರೀಕ್ಷೆ ಮುಂದೂಡಲಾಗಿದೆಯೆಂದು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದು, ಮಂಗಳೂರು ವಿವಿ ಪರೀಕ್ಷೆ ಜು. 18ರಂದು ಯಥಾವತ್ತಾಗಿ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರು ಸ್ಪಷ್ಟನೆ ನೀಡಿದ್ದಾರೆ.
ಪರೀಕ್ಷೆ ಮುಂದೂಡಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದ್ದು, ಜು. 18ರಂದು ನಿಗದಿಪಡಿಸಿರುವ ಎಲ್ಲಾ ಪದವಿ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ / ಮುಂದೂಡಿಕೆ ಇರುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸೈಬರ್ ಕ್ರೈಂ ಠಾಣೆಗೆ ದೂರು ನೀಡಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರು ಸ್ಪಷ್ಟನೆ ನೀಡಿದ್ದಾರೆ.