ಉಡುಪಿ, ಜು 19 (DaijiworldNews/AK): ಎನ್ ಡಿಎ ವರ್ಸಸ್ ಇಂಡಿಯಾ ಅಲ್ಲ, ಇದು ಭಾರತ ವರ್ಸಸ್ ಇಂಡಿಯಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಪಕ್ಷಗಳ ಮೈತ್ರಿಕೂಟದ ಕುರಿತು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು , ವಿಪಕ್ಷಗಳು ತಮ್ಮ ಒಕ್ಕೂಟಕ್ಕೆ ಸಂವಿಧಾನ ವಿರೋಧಿ ಹೆಸರು ಇಟ್ಟುಕೊಂಡಿದ್ದಾರೆ. ಲಾಂಛನಗಳು ಮತ್ತು ಹೆಸರುಗಳು (ಅಸಮರ್ಪಕ ಬಳಕೆಯ ತಡೆಗಟ್ಟುವಿಕೆ) ಕಾಯಿದೆ ಪ್ರಕಾರ ಈ ರೀತಿ ಇಂಡಿಯಾ ಎನ್ನುವ ಹೆಸರನ್ನು ಯಾವುದೇ ಪಾರ್ಟಿ ಸಂಘಟನೆ ಸಂಸ್ಥೆಗೆ ಇಡುವಂತಿಲ್ಲ ಎಂದು ಹೇಳಿದರು.
60 ವರ್ಷ ದೇಶ ಆಳಿದವರು ಬೇರೆ ಯಾವುದೇ ಹೆಸರಿಟ್ಟರೆ ಜನ ಬೆಲೆ ಕೊಡುವುದಿಲ್ಲ. ಈ ಕಾರಣಕ್ಕೆ ಇಂಡಿಯಾ ಎಂಬ ಹೆಸರಿಟ್ಟಿದ್ದಾರೆ. ಇದು ಎನ್ ಡಿ ಎ ವರ್ಸಸ್ ಇಂಡಿಯಾ ಅಲ್ಲ, ಇದು ಭಾರತ ವರ್ಸಸ್ ಇಂಡಿಯಾ. ಭಾರತದಲ್ಲಿ ಈಗ ಹೊಸ ಕಂಪನಿ ಆರಂಭವಾಗಿದೆ. ವೆಸ್ಟ್ ಇಂಡಿಯಾ ಕಂಪನಿಯನ್ನು ದೇಶವಾಸಿಗಳು ಓಡಿಸಿದ್ದರು. 2024ರಲ್ಲಿ ಮತ್ತೊಮ್ಮೆ ದೇಶದ ಗರಿಮೆಯನ್ನು ಎತ್ತಿ ಹಿಡಿಯುತ್ತಾರೆ. ಈ ಈಸ್ಟ್ ಇಂಡಿಯಾ ಕಂಪೆನಿಗೆ ನರೇಂದ್ರ ಮೋದಿಯೇ ಟಾರ್ಗೆಟ್ ಭಾರತದ ಜನ ನರೇಂದ್ರ ಮೋದಿಗೆ ಬೆಂಬಲ ನೀಡುತ್ತಾರೆ ಎಂದರು
ಇದೇ ವೇಳೆ ಎನ್ಸಿಪಿ ಅಜಿತ್ ಪವರ್ ಎನ್ ಡಿಎ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಅವರು , ಇದು ಅಜಿತ್ ಪವಾರ್ ಅವರಿಗೆ ಸೇರಿದ ವಿಚಾರ ಕುಟುಂಬ ರಾಜಕಾರಣದಿಂದ ಬೇಸತ್ತು ಎನ್ ಡಿ ಎ ಸೇರಿದ್ದಾರೆ ಅಜಿತ್ ಪವಾರ್ ಅವರೇ ಎನ್ ಸಿಪಿ ನಾಯಕ ಎಂದು ಎಲ್ಲರೂ ಹೇಳುತ್ತಿದ್ದರು. ಆದರೆ ಎನ್ ಸಿಪಿ ಅಧ್ಯಕ್ಷನ ಚುನಾವಣೆಯಲ್ಲಿ ಅಜಿತ್ ಪವಾರ್ ರನ್ನು ಗಣನೆಗೆ ತೆಗೆದುಕೊಂಡಿಲ್ಲ. ಕುಟುಂಬ ರಾಜಕಾರಣದಿಂದ ಬೇಸತ್ತು ಅವರು ಆಚೆ ಬಂದಿದ್ದಾರೆ. ಅಜಿತ್ ಪವಾರ್ ಜೊತೆ ಬಿಜೆಪಿ ಗಟ್ಟಿಯಾಗಿ ನಿಲ್ಲಲಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.
ರಾಜ್ಯದಲ್ಲಿ ಗ್ಯಾರಂಟಿ ಜಾರಿ ವಿಚಾರದ ಬಗ್ಗೆ ಮಾತನಾಡಿದ ಕರಂದ್ಲಾಜೆ, ಮೂರು ನಾಲ್ಕು ತಿಂಗಳಲ್ಲಿ ಕೆ ಎಸ್ ಆರ್ ಟಿ ಸಿ ನಿಗಮ ಸ್ಥಗಿತ ಕೊಳ್ಳುವ ಆತಂಕ ಎದುರಾಗಿದೆ. ಕೆಎಸ್ಆರ್ಟಿಸಿ ಬಜೆಟ್ ನಲ್ಲಿ ಯಾವುದೇ ವಿಶೇಷ ಅನುದಾನ ಕೊಟ್ಟಿಲ್ಲ. ಇನ್ನು 200 ಯೂನಿಟ್ ಉಚಿತ ವಿದ್ಯುತ್ ಇವತ್ತಿನ ತನಕ ಕಾರ್ಯರೂಪಕ್ಕೆ ಬಂದಿಲ್ಲ. ಭಾಗ್ಯಲಕ್ಷ್ಮಿ ಮತ್ತು ನಿರುದ್ಯೋಗಿ ಭತ್ತೆ, ಮುಂದೂಡುತ್ತಿದ್ದಾರೆ. ಎಂದು ಟೀಕಿಸಿದರು
ರಾಜ್ಯದಲ್ಲಿ ಎಲ್ಲಾ ಗ್ಯಾರೆಂಟಿ ವಿಚಾರದಲ್ಲಿ ಗೊಂದಲ ಕಾಡುತ್ತಿದೆ. ಕೇಂದ್ರ ಸರ್ಕಾರ ಕರೆದಿರುವ ಟೆಂಡರ್ ನಲ್ಲಿ ಬಿಡ್ ಮಾಡುತ್ತಿಲ್ಲಮೋದಿಯನ್ನು ದೂರುವ ಚಾಳಿ ಮಾತ್ರ ಮುಂದುವರೆಸಿದ್ದೀರಿ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.