ಮಂಗಳೂರು,ಏ03(AZM):ಸಾಮಾಜಿಕ ಜಾಲತಾಣದ ಮೂಲಕ ಮಂಗಳೂರಿನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಪೊಲೀಸರು ಭೇಧಿಸಿ ಇಬ್ಬರನ್ನು ಬಂಧಿಸಿದ್ದಾರೆ.
ಹೊರ ರಾಜ್ಯದ ಮಹಿಳೆಯರನ್ನು ಇಟ್ಟುಕೊಂಡು ನಂತೂರಿನ ಫ್ಲ್ಯಾಟ್ ಒಂದರಲ್ಲಿ ಲೊಕ್ಯಾಂಟೋ ವೆಬ್ ಸೈಟ್ ಮುಖಾಂತರ ಮಹಿಳೆಯರ ಫೋಟೋವನ್ನು ಅಪ್ಲೋಡ್ ಮಾಡಿ ಗಿರಾಕಿಗಳನ್ನು ಆಹ್ವಾನಿಸಿ ಹೈ ಫೈ ವೇಶ್ಯಾವಾಟಿಕೆ ನಡೆಸಲಾಗಿದ್ದು, ಈ ಕುರಿತು ಮಂಗಳೂರಿನ ಎಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ. ಹಾಗೂ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ದಾಳಿ ಸಂದರ್ಭದಲ್ಲಿ ಮನೆಯಲ್ಲಿದ್ದ ಉತ್ತರ ಪ್ರದೇಶ ಮತ್ತು ಒಡಿಶಾ ಮೂಲದ ಮೂವರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ.
ಬಂಧಿತರನ್ನು ಬಂಟ್ವಾಳದ ಐವನ್ ಸಿರಿಲ್ ಪಿಂಟೊ ಮತ್ತು ಯೆಯ್ಯಾಡಿಯ ನಿವಾಸಿ ಸತೀಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಬಂಧಿತ ಅರೋಪಿಗಳಿಂದ 23 ಸಾವಿರ ರೂಪಾಯಿ ನಗದು ಸೇರಿದಂತೆ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.