ಮಂಗಳೂರು, ಜು 20 (DaijiworldNews/SM): ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಯೋಜನೆಯಡಿ ನೋಂದಣಿಗಾಗಿ 11 ಕೇಂದ್ರಗಳನ್ನು ತೆರೆಯಲಾಗಿದೆ.
ಅಲ್ಲದೇ 3 ವಲಯ ಕಚೇರಿಗಳಲ್ಲಿ 6 ಕೇಂದ್ರಗಳು ಆರಂಭವಾಗಿವೆ. ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು.20ರ ಗುರುವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿದ್ದರು.