ಬಂಟ್ವಾಳ, ಜು 23 (DaijiworldNews/SM): ನಿರಂತರ ಮಳೆಯಿಂದಾಗಿ ನೇತ್ರಾವತಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಿಂದ ಬಾಧಿತವಾಗುವ ಶಾಲೆಗಳಿಗೆ ಸೋಮವಾರ(ಜು.24) ರಜೆ ಘೋಷಣೆ ಮಾಡುವಂತೆ ಬಂಟ್ವಾಳ ಬಿಇಒ ಆದೇಶ ನೀಡಿದ್ದಾರೆ.
ಹಯತುಲ್ ಶಾಲೆ ಗೂಡಿನ ಬಳಿ, ಕಿರಿಯ ಪ್ರಾಥಮಿಕ ಶಾಲೆ ವಳವೂರು, ಶಾರದ ಮತ್ತು ಎಸ್ ಎಲ್ ಎನ್ ಪಿ ಪಾಣೆಮಂಗಳೂರು ,ಎಲ್ ಸಿ ಆರ್ ಕಕ್ಕೆ ಪದವು, ಕೆಪಿಎಸ್ ಮೊಂಟೆಪದವು, ಕುನಿಲ್ ಶಾಲೆ ತುಂಬೆ. ಬಿ ಎ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆ ಪೆರ್ಲಬಿಯಪಾದೆ ಶಾಲೆ, ಸರಪಾಡಿ ಪ್ರೈಮರಿ ಶಾಲೆ, ಹೆಗಡೆ ಶಾಲೆ, ಪೂಪಾಡಿ ಕಟ್ಟಿ ಶಾಲೆ, ದಡ್ಡಲಕಾಡು, ಎರ್ಮಾಳ್ ಪದವು ಮಜ್ಲಿಸ್ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕರಾವಳಿಯಲ್ಲಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ. ಇದರ ಪರಿಣಾಮ ನೇತ್ರಾವತಿ ನದಿಯಲ್ಲಿ ಒಳಹರಿವು ಏರಿಕೆಯಾಗಿದೆ. ಸಾರ್ವಜನಿಕರ ಅದರಲ್ಲೂ ವಿದ್ಯಾರ್ಥಿಗಳ ಹಿತದೃಷ್ಠಿಯನ್ನು ಗಮನದಲ್ಲಿರಿಸಿ ತಹಸೀಲ್ದಾರರ ಸೂಚನೆಯಂತೆ ನೇತ್ರಾವತಿ ನದಿಯಿಂದ ಬಾಧಿತವಾಗುವ ಶಾಲೆಗಳಿಗೆ ನಾಳೆ (24/07/2023) ರಜೆ ಘೋಷಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.