ಕುಂದಾಪುರ, ಜು, 24 (DaijiworldNews/AK):ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಿರುಸೇತುವೆಯೊಂದು ವರ್ಷಪೂರ್ಣಗೊಳ್ಳುವ ಮೊದಲೇ ಮಳೆ ನೀರಿಗೆ ಕೊಚ್ಚಿ ಹೋದ ಘಟನೆ ನಡೆದಿದೆ.
ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಗರ್ಸೆ ಗ್ರಾಮದ ನೀರೋಡಿ ಎಂಬ ಗ್ರಾಮೀಣ ಪ್ರದೇಶಕ್ಕೆ ಕಳೆದ ವರ್ಷ ಪಟ್ಟಣ ಪಂಚಾಯಿತಿ ವತಿಯಿಂದ 3 ಲಕ್ಷ ಅನುದಾನದಲ್ಲಿ ಕಿರು ಸೇತುವೆ ನಿರ್ಮಾಣ ಮಾಡಲಾಗಿತ್ತು.
ಆದರೆ ವರ್ಷದ ಆರಂಭದ ಮಳೆಗೆ ಕಿರು ಸೇತುವೆ ಸಂಪೂರ್ಣ ಕೊಚ್ಚಿ ಹೋಗಿದೆ. ಶಾಲಾ ವಿದ್ಯಾರ್ಥಿಗಳಿಗೆ ರೈತರಿಗೆ ಕೂಲಿ ಕಾರ್ಮಿಕರಿಗೆ ಒಂದು ಊರಿನಿಂದ ಇನ್ನೊಂದು ಊರಿಗೆ ಹೋಗುವ ಸೇತುವೆ ಇದಾಗಿದ್ದು, ಈಗ ಜನಸಾಮಾನ್ಯರು ಅಸಹಾಯಕರಾಗಿದ್ದಾರೆ.
ಕಳೆದ ವರ್ಷ ಖರ್ಚು ಮಾಡಿದ ಮೂರು ಲಕ್ಷ ರೂಪಾಯಿ ನೀರಿನಲ್ಲಿ ಹೋಮ ಮಾಡಿದಂತಾಗಿದೆ ಎಂದು ಸ್ಥಳೀಯರು ಆಕ್ರೋಶವ್ಯಕ್ತಪಡಿಸಿದ್ದಾರೆ
ಉಡುಪಿ ಜಿಲ್ಲಾಧಿಕಾರಿಗಳು, ಬೈಂದೂರು ತಹಸೀಲ್ದಾರ್ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಸ್ಪಂದಿಸುವಂತೆ ಸಾಮಾಜಿಕ ಹೋರಾಟಗಾರ ವೀರಭದ್ರ ಗಾಣಿಗ ಆಗ್ರಹಿಸಿದ್ದಾರೆ.