ಮಂಗಳೂರು, ಜು 24(DaijiworldNews/SM): ದ.ಕ. ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ ರಜೆ ಘೋಷಣೆ ಮಾಡಲಾಗಿದ್ದು, ಈ ನಡುವೆ ನಾಳೆ (ಜು.25)ನಡೆಯಬೇಕಿದ್ದ ಮಂಗಳೂರಿ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿವಿ ಪ್ರಕಟನೆಯಲ್ಲಿ ತಿಳಿಸಿದೆ.
ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ, ದಿನಾಂಕ 25-07-2023ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು.
ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಈ ಮೂಲಕ
ತಿಳಿಸಲಾಗಿದೆ.