ಉಡುಪಿ, ಜು 25 (DaijiworldNews/AK):ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ವಿಚಾರ ತಪ್ಪಿತಸ್ಥ ವಿದ್ಯಾರ್ಥಿನಿಯರ ವಿರುದ್ಧ ಪೊಲೀಸ್ ಇಲಾಖೆ ಸುಮೊಟೊ ಕೇಸು ದಾಖಲಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಉಡುಪಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಜಿಲ್ಲೆ.ಮಹಿಳೆಯರಿಗೆ ಗೌರವ ಕೊಡುವ ಜಿಲ್ಲೆ ಈ ಜಿಲ್ಲೆಯಲ್ಲಿ ಮೂರು ಹುಡುಗಿಯರ ವರ್ತನೆಯಿಂದ ತಲೆತಗ್ಗಿಸುವಂತಾಗಿದೆ. ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶೌಚಾಲಯದಲ್ಲಿ ವಿಡಿಯೋ ಕ್ಯಾಮೆರಾ ಇಟ್ಟಿರುವುದು ಸರಿಯಲ್ಲ. ಇದರಲ್ಲಿ ಬ್ಲಾಕ ಮೇಲ್ ಮಾಡುವ ಷಡ್ಯಂತ್ರ. ಈ ಕುರಿತು ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿಗಳ ಗಮನಕ್ಕೆ ತರುತ್ತೇನೆ. ಉಡುಪಿ ಜಿಲ್ಲೆಯ ಪೊಲೀಸ್ ಇಲಾಖೆ ಮೇಲೆ ವಿಶ್ವಾಸ ಇದೆ. ವಿಳಂಬ ಮಾಡಿದರೆ ನ್ಯಾಯಕ್ಕಾಗಿ ಹೋರಾಡುತ್ತೇವೆ ಎಂದರು.
ಮುಸ್ಲಿಂ ವಿದ್ಯಾರ್ಥಿನಿಯರ ನಡೆ ಸಂಶಯ ಹುಟ್ಟಿಸುತ್ತಿದೆ. ಜಿಹಾದಿ ಸಂಘಟನೆಗಳ ಕೈವಾಡ ಸಂಶಯ ಇದೆ. ಕಾಲೇಜಿಗೆ ಭೇಟಿ ನೀಡಿ ಮಾತನಾಡುತ್ತೇನೆ. ವಿಡಿಯೋ ಕ್ಲಿಪಿಂಗ್ ಇದಿಯೋ ಇಲ್ಲವೋ ಗೊತ್ತಿಲ್ಲ ಆದರೆ ಸೂಕ್ತ ಕ್ರಮ ಜರುಗಿಸಬೇಕು ಎಂದರು.
ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದ ರಶ್ಮಿ ಸಾಮಂತ್ ಪೊಲೀಸರಿಂದ ಕಿರುಕುಳ ವಿಚಾರ ಪೊಲೀಸರು ಮನೆಗೆ ಹೋಗಿ ವಿಚಾರಣೆ ಮಾಡಿದ್ದಾರೆ. ರಶ್ಮಿ ಸಾಮಂತ್ ಮನೆಯವರನ್ನು ಭೇಟಿ ಮಾಡಿ ಮಾತನಾಡುತ್ತೇನೆ . ಪ್ರಕರಣಗಳಿಂದ ಶಿಕ್ಷಣ ಸಂಸ್ಥೆಗಳಿಗೆ ಹೊಡೆತ ಬೀಳುತ್ತದೆ ಎಂದರು.