ಉಡುಪಿ, ಜು 26(DaijiworldNews/SM): ಒಂದುವರೆ ಗಂಟೆಗಳ ಕಾಲ ಎಸ್ ಪಿ ಹಾಗೂ ಡಿಸಿ ಜೊತೆ ಮಾತುಕತೆ ನಡೆಸಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಇದೀಗ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣ ಇಷ್ಟೊಂದು ವೈರಲ್ ಆಗಲು ಕಾರಣವೇನು ಅನ್ನೋದರ ಬಗ್ಗೆ ಗಮನ ಹರಿಸಬೇಕು. ಅನೇಕ ಸಂಗತಿಗಳ ತನಿಖೆ ಆಗಬೇಕಾಗಿದೆ ಎಂದು ಅವರು ಆಗ್ರಹಿಸಿದ್ದಾರೆ.
ಪೂರಕ ಸಾಕ್ಷಿಗಳ ಸಂಗ್ರಹ ಮಾಡಬೇಕಾಗಿದೆ. ನಾಳೆ ನಾನು ಕಾಲೇಜಿಗೆ ಭೇಟಿಯಾಗಿ ಆಡಳಿತ ಮಂಡಳಿಯ ಜೊತೆ ಮಾತನಾಡಬೇಕಿದೆ. ಆ ಬಳಿಕ ಘಟನೆಯನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ಈ ಘಟನೆಯನ ಇಟ್ಟುಕೊಂಡು ಅನೇಕ ಫೇಕ್ ವಿಡಿಯೋಗಳು ಹರಿದಾಡುತ್ತಿವೆ. ಹರಿದಾಡುತ್ತಿರುವ ವಿಡಿಯೋಗಳು ಯಾವುದು ಸತ್ಯವಲ್ಲ. ಇವರಿಗೆ ಯಾವುದೇ ವಿಡಿಯೋ ಸಾಕ್ಷ್ಯ ಲಭ್ಯವಾಗಿಲ್ಲ. ವಿದ್ಯಾರ್ಥಿನಿಯರ ಮೊಬೈಲ್ ನಲ್ಲಿ ಯಾವುದೇ ವಿಡಿಯೋ ಕಂಡು ಬಂದಿಲ್ಲ. ಸಂಬಂಧಪಟ್ಟ ಮೊಬೈಲ್ ಗಳನ್ನು ಪೊಲೀಸರು ರೆಟ್ರೀವ್ ಮಾಡಿದ್ದಾರೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
40 ಗಂಟೆಗಳ ಕಾಲ ರೆಟ್ರಿವ್ ಮಾಡಿದರೂ ಏನು ಪತ್ತೆಯಾಗಿಲ್ಲ. ಮೂರು ಮೊಬೈಲ್ಗಳ ಡಾಟಾ ಸಂಗ್ರಹ ಮಾಡಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮೊಬೈಲ್ ಕಳುಹಿಸಬೇಕಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಸಾಕ್ಷ ಲಭ್ಯವಾದರೆ ವಿಡಿಯೋ ಬಗ್ಗೆ ಸ್ಷಷ್ಟತೆ ಸಿಗಬಹುದು. ಸೂಕ್ತ ಸಾಕ್ಷಿ ಸಿಗದೇ ಹೋದರೆ ಚಾರ್ಜ್ ಶೀಟ್ ಮಾಡಲು ಸಾಧ್ಯವಿಲ್ಲ. ಸಾಕ್ಷವಿಲ್ಲದಿದ್ದರೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸದ್ಯ ಆ ವಿದ್ಯಾರ್ಥಿನಿಯರನ್ಬು ನಾವು ಆರೋಪಿತರು ಎಂದು ಕರೆಯಬಹುದು ಅಷ್ಟೇ ಎಂಡು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಪ್ರಕರಣದಲ್ಲಿ ಭಾಗಿಯಾದ ಮೂರು ವಿದ್ಯಾರ್ಥಿನಿಯರ ಅಮಾನತು ಮಾಡಲಾಗಿದೆ. ಈ ಪ್ರಕರಣಕ್ಕೆ ಟೆರರ್ ಲಿಂಕ್ ಇದೆ ಎಂದು ವಾಟ್ಸಾಪ್ ಸಂದೇಶಗಳು ಹರಿದಾಡುತ್ತಿವೆ.
ಪ್ರಕರಣದ ಹಿಂದೆ ಅನೇಕ ಸಂಶಯ ಆಸ್ಪದ ಸಂಗತಿಗಳನ್ನು ಹರಿಯ ಬಿಡಲಾಗಿದೆ. ಘಟನೆಯ ಹಿಂದೆ ಬಿಗರ್ ಥಿಯರಿ ಅಥವಾ ಬೀಗ್ಗರ್ ಸ್ಟೋರಿ ಇದೆ ಎಂದು ಸದ್ಯ ಭಾವಿಸುವುದು ಬೇಡ. ನಾವೇ ನ್ಯಾಯಾಧೀಶರಾಗಿ ತೀರ್ಪು ಕೊಡುವುದು ಅಗತ್ಯವಿಲ್ಲ. ಮಹಿಳಾ ಆಯೋಗ ಮತ್ತು ಪೊಲೀಸರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಎಳೆಯ ಮನಸ್ಸುಗಳು ಒಳಗೊಂಡಿವೆ. ಸರಿಯಾದ ಹಾದಿಯಲ್ಲಿ ಪ್ರಕರಣದ ತನಿಖೆ ಆಗಬೇಕು. ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಪ್ರತಿಕ್ರಿಯೆ ನೀಡಿದ್ದಾರೆ.