ಕಾಸರಗೋಡು, ಜು 26(DaijiworldNews/SM): ಅಸ್ವಸ್ಥಗೊಂಡ ಕಾಞ೦ಗಾಡ್ ನ ವಸತಿ ನಿಲಯದ 19 ವಿದ್ಯಾರ್ಥಿಗಳನ್ನು ನೀಲೇಶ್ವರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಲದಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸತತ ಕೆಮ್ಮು ಕಂಡುಬಂದುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಭೇಟಿಯಾದ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಅವರು ಯೋಗ ಕ್ಷೇಮ ವಿಚಾರಿಸಿದರು. ಜಿಲ್ಲಾ ವೈದ್ಯಾಧಿಕಾರಿಗಳು ಜೊತೆಗಿದ್ದರು.