ಕಾಸರಗೋಡು, ಜು 27 (DaijiworldNews/HR): ಮಣಿಪುರ ಘಟನೆ ಖಂಡಿಸಿ ಮುಸ್ಲಿಂ ಯೂತ್ ಲೀಗ್ ಕಾಞ೦ಗಾಡ್ ನಲ್ಲಿ ನಡೆಸಿದ ಪ್ರತಿಭಟನಾ ಮೆರವಣಿಗೆ ಸಂದರ್ಭದಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ಸಲಾಂ (18), ಷರೀಫ್ (38) ಪಿ.ಎಚ್ ಅಯೂಬ್ (45), ಪಿ.ಮುಹಮ್ಮದ್ ಕುಂಞ (55) ಬಂಧಿತರು.
ಬಂಧಿತರ ವಿರುದ್ಧ ಜಾಮೀನು ರಹಿತ ಮೊಕದ್ದಮೆ ಹೂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಕಾಞ೦ಗಾಡ್ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಘೋಷಣೆಗಳನ್ನು ಕೂಗಿದ ಬಗ್ಗೆ ಪೊಲೀಸರಿಗೆ ಲಭಿಸಿದ ದೂರಿನಂತೆ ಕ್ರಮ ತೆಗೆದುಕೊಳ್ಳಲಾಗಿದೆ.