ಉಡುಪಿ, ಜು 29 (DaijiworldNews/HR): ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬದಲಾವಣೆ ಮಾಡಲಾಗಿದೆ.
ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಈ ಹಿಂದಿನ ತನಿಖಾಧಿಕಾರಿಯಾಗಿದ್ದ ಮಲ್ಪೆ ಠಾಣೆಯ ಇನ್ ಸ್ಪೆಕ್ಟರ್ ಮಂಜುನಾಥ ಗೌಡ ಅವರನ್ನು ವರ್ಗಾಯಿಸಬೇಕೆಂಬ ಆಗ್ರಹ ಕೇಳಿಬಂದಿದ್ದು, ಅದರಂತೆ ಶನಿವಾರ ಅಧಿಕಾರಿಯನ್ನು ಬದಲಾಯಿಸಲಾಗಿದೆ.