ಮಂಗಳೂರು,ಜು 29 (DaijiworldNews/AK):ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಯ ಸಂಘಟನೆಯ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಅವರ ಕುರಿತು ಅಪಪ್ರಚಾರ ಮಾಡಿ ತೇಜೋವಧೆ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಸರಕಾರಿ ನೌಕರರ ಸಂಘ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಮನವಿ ಸಲ್ಲಿಸಿದರು.
ಸರಕಾರಿ ನೌಕರರ ಕೇಂದ್ರ ಸಂಘ, ಜಿಲ್ಲಾ ಶಾಖೆಗಳು, ತಾಲೂಕಾ ಶಾಖೆಗಳ ಸಂಘಟನೆಯ ತೇಜೋವಧೆ ಮಾಡುವ ಉದ್ದೇಶದಿಂದ ಆಧಾರ ರಹಿತ ಆರೋಪಗಳನ್ನು ಮಾಡಲಾಗುತ್ತಿದೆ. ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಘಟನೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುವುದು ಖಂಡನೀಯ. ಅಪಪ್ರಚಾರ ಮಾಡುವವರ ವಿರುದ್ಧ ಸರಿಯಾದ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಪಿ.ಕೆ ಕೃಷ್ಣ, ಜಿಲ್ಲಾಧ್ಯಕ್ಷರು, ಎಚ್ ಗಣೇಶ್ ರಾವ್ , ಜಿಲ್ಲಾ ಕಾರ್ಯದರ್ಶಿ ಎಂ ಎಸ್ ನವೀನ್ ಕುಮಾರ್, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸರಕಾರಿ ನೌಕರರು ಹಾಜರಿದ್ದರು.