ಮಂಗಳೂರು, ಜು 31 (DaijiworldNews/HR): ಉಡುಪಿ ಖಾಸಗಿ ಶಾಲಾ ಶೌಚಾಲಯದಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರಿಂದ ಹಿಂದೂ ವಿದ್ಯಾನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಖಂಡಿಸಿ ಮತ್ತು ಈ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸುವಂತೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.
ಈ ಸಂಧರ್ಭ ದ.ಕ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಬಿಜೆಪಿ ಮುಖಂಡರು ಎಲ್ಲಾ ಜಿಲ್ಲಾ ಶಾಸಕರು ಉಪಸ್ಥಿತರಿದ್ದರು
ನಳೀನ್ ಕುಮಾರ್ ಕಟೀಲ್ ಅವರು ರಾಜ್ಯ ಸರಕಾರದ ಕಟು ನಿರ್ಧಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು ಹಾಗೂ ಪೋಲಿಸ್ ಇಲಾಖೆಯ ಬೇಜವಬ್ಧಾರಿ ಹಾಗೂ ನಿರ್ಲಕ್ಷ್ಯದ ವಿರುಧ್ದ ಗುಡುಗಿದರು .
ಇನ್ನು ಈ ಪ್ರಕರಣವನ್ನು ಸರಿಯಾಗಿ ವಿಚಾರಣೆ ಮಾಡಿ ತಪ್ಪಿತಸ್ಥರನ್ನು ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸ ಬೇಕೆಂದು ಸರಕಾರಕ್ಕೆ ಆಗ್ರಹಿಸಿದರು.