ಕುಂದಾಪುರ, ಜು 31 (DaijiworldNews/HR): ಕೇಂದ್ರ ದೂರ ಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಆಗಸ್ಟ್ 1ರಂದು ಸಂಸದ ಬಿ.ವೈ. ರಾಘವೇಂದ್ರ ಭೆಟಿ ಮಾಡಿದರು.
ಈ ಸಂದರ್ಭ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಬಿ.ಎಸ್.ಎನ್.ಎಲ್ ಮೊಬೈಲ್ ಟವರ್ ಮಂಜೂರಾತಿಗೆ ಮನವಿ ಮಾಡಿದರು ಹಾಗೂ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿರುವ ಬೈಂದೂರು, ಶಿರೂರು, ಬಿಜೂರು ಹಾಗೂ ಸೇನಾಪುರ ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ರೈಲುಗಳ ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.
ಇನ್ನು ಸಂಸದರ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.