ಮಂಗಳೂರು, ಆ. 01 (DaijiworldNews/SM): ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ ರಾಜಕಾರಣ ಚುನಾವಣೆ ವೇಳೆ ಮಾತ್ರ. ಅಧಿಕಾರಿಗಳು ನಿಲಕ್ಷ್ಯ, ಉದಾಸೀನ ತೋರಿಸಿದರೆ ಜನರಿಗೆ ಸ್ಪಂದಿಸದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಉಡುಪಿಯ ರಜತಾದ್ರಿಯಲ್ಲಿ ಸಿಎಂ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಂದರ್ಬದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಗರಂ ಆದ್ರು. ಅಧಿಕಾರಿಗಳಿಗೆ ಸ್ಥಾನ ಮಾನ ಸಂಬಳ ಸವಲತ್ತುಗಳು ಸಿಗುವುದು ಜನರ ತೆರಿಗೆ ಹಣದಿಂದ. ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಬೇಟಿ ನೀಡುವುದು ಕಡ್ಡಾಯ. ಜಿಲ್ಲಾ ರಕ್ಷಣಾಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಬೇಕು. ದೂರುಗಳು ಬಂದಾಗ ಮೊದಲು ಎಫ್ಐಆರ್ ದಾಖಲಿಸಿಕೊಳ್ಳಿ ಎಂದರು.