ಬೆಳ್ತಂಗಡಿ, ಆ 3 (DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಘಟನೆಗಳು ಮುಂದುವರಿದಿದ್ದು, ಆ.2ರಂದು ರಾತ್ರಿ ವೇಳೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ಅನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ.
ರಾತ್ರಿ 9 ಗಂಟೆ ವೇಳೆಗೆ ಆಟೋದಲ್ಲಿ ಪ್ರಯಾಣಿಕರನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿದ ಸಂಘಪರಿವಾರದ ಕಾರ್ಯಕರ್ತರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಗೊಳಗಾದ ಆಟೋ ಚಾಲಕನನ್ನು ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಎಂದು ಗುರುತಿಸಲಾಗಿದೆ.
ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.