ಉಡುಪಿ, ಆ 3 (DaijiworldNews/AK): ಜಿಲ್ಲೆಯ ಹಲವು ಕಡೆ ಆಗಸ್ಟ್ 3 ಮತ್ತು 4 ರಂದು 30-40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಕೆ ವಿದ್ಯಾ ಕುಮಾರಿ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಿದೆ ಮತ್ತು ಅಪಾಯಕಾರಿ ಕಟ್ಟಡ, ಮರ, ಕಂಬಗಳ ಕೆಳಗೆ ಮತ್ತು ಹತ್ತಿರದಲ್ಲಿ ನಿಲ್ಲಬಾರದು ಎಂದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.