ಬೈಂದೂರು ಆ 04 (DaijiworldNews/HR): ಮೀನುಗಾರಿಕೆ ನಡೆಸುತ್ತಿದ್ದಾಗ ದೋಣಿಯೊಂದು ಬೃಹತ್ ಅಲೆಗೆ ದೋಣಿ ಸಿಲುಕಿ ಪಲ್ಟಿಯಾದ ಘಟನೆ ಕೊಡೇರಿ ಕಡಲ ತೀರದಲ್ಲಿ ಶುಕ್ರವಾರ ಸಂಭವಿಸಿದೆ.
ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಪಾಳ್ಯದರತೋಪ್ಲು ಪುರ್ಶುಯ್ಯನ ಪುಂಡಲಿಕ ಎನ್ನುವರ ಮಾಲಿಕತ್ವದ ಶ್ರೀ ದುರ್ಗಾಪರಮೇಶ್ವರಿ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ ಬೃಹತ್ ಅಲೆಗೆ ದೋಣಿ ಸಿಲುಕಿ ಪಲ್ಟಿಯಾಗಿದೆ.
ಇನ್ನು ಕೊಡೇರಿ ಸಮುದ್ರ ತೀರದ ಸುಮಾರು 5 ನಾಟಿಕಲ್ ದೂರದಲ್ಲಿ ಅಲೆಗಳ ಹೊಡೆತಕ್ಕೆ ದೋಣಿ ಸಿಲುಕಿ ಪಲ್ಟಿಯಾಗಿದ್ದು, ತಕ್ಷಣ ಇತರೆ ದೋಣಿಗಳ ಸಹಾಯದಿಂದ 9 ಮಂದಿ ಮೀನುಗಾರನ್ನು ರಕ್ಷಣೆ ಮಾಡಲಾಗಿದೆ.