ಉಡುಪಿ, ಆ 07 (DaijiworldNews/HR): ಉಡುಪಿಯ ಕಾಲೇಜುವೊಂದರ ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಮಹತ್ವದ ಆದೇಶ ಹೊರಡಿಸಿದೆ.
ಉಡುಪಿಯ ಖಾಸಗಿ ಕಾಲೇಜಿನಲ್ಲಿ ಜುಲೈ 18 ರಂದು ನಡೆದಿದ್ದ ವಿಡಿಯೋ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಎಬಿವಿಪಿ ಬಿಜೆಪಿ ಸೇರಿದಂತೆ ಅನೇಕ ಸಂಘಟನೆಗಳು ಈ ಘಟನೆಯನ್ನು ವಿರೋಧಿಸಿ ಪ್ರತಿಭಟನೆ ಮಾಡಿತ್ತು,
ಇನ್ನು ಈ ಪ್ರಕರಣದ ತನಿಖೆ ಎಸ್ಐಟಿಗೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿತ್ತು.
ಸಿಐಡಿ ತಂಡ ನಾಳೆ ಉಡುಪಿಗೆ ಭೇಟಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣ ಉಡುಪಿ ಜಿಲ್ಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.