ವಿಟ್ಲ, ಆ 08 (DaijiworldNews/HR): ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಪೆರುವಾಯಿ ಗ್ರಾಮದ ಕಿನಿಯರಪಾಲು ನಿವಾಸಿ ಸುಧೀರ್ ಕುಮಾರ್ (34) ಎಂದು ಗುರುತಿಸಲಾಗಿದೆ.
ಇನ್ನು ಆರೋಪಿಯ ವಿರುದ್ದ ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಹೊರಡಿಸಲಾಗಿತ್ತು. ಆದರೆ ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ವಿಟ್ಲ ಪೊಲೀಸ್ ಇನ್ ಸ್ಪೆಕ್ಟರ್ ನಾಗರಾಜ್ ಅವರ ಸೂಚನೆ ಮೇರೆಗೆ, ಎಸ್ಸೈಗಳಾದ ಕಾರ್ತಿಕ್ ಮತ್ತು ವಿದ್ಯಾ ಕೆ, ಸಿಬ್ಬಂದಿ ಅಡ್ಯನಡ್ಕ ಎಂಬಲ್ಲಿ ಸುಧೀರ್ ಕುಮಾರ್ ನನ್ನು ಬಂಧಿಸಿದ್ದಾರೆ.