ಮಂಗಳೂರು, ಆ 09(DaijiworldNews/AK): ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ನಗರದ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಸಹಾಯಕ ಆಯುಕ್ತ ಹರ್ಷವಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು