ಮಂಗಳೂರು, ಆ 10 (DaijiworldNews/HR): ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ರಾಯಚೂರು ಮೂಲದ ಯಮನೂರ ಎಂದು ಗುರುತಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ, ಆರೋಪಿಯು ವಾಮಂಜೂರು ಠಾಣೆ ಪಿಎಸ್ಐ ಎಂದು ಹೇಳಿಕೊಂಡು ಸಂತ್ರಸ್ತೆಯೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾಗಿ, ಆಕೆಯ ಕುಟುಂಬಕ್ಕೆ ಕೆಲಸ ಕೊಡಿಸುವಲ್ಲಿ ನೆರವು ನೀಡುವುದಾಗಿ ಭರವಸೆ ನೀಡಿ ಆಕೆಯ ಎಲ್ಲಾ ಸಂಬಂಧಿತ ದಾಖಲೆಗಳನ್ನು ಪಡೆದುಕೊಂಡಿದ್ದಾನೆ.
ಇನ್ನು ಮೇ 2023 ರಲ್ಲಿ ಇಬ್ಬರೂ ದೇವಸ್ಥಾನದಲ್ಲಿ ಭೇಟಿಯಾಗಿ ಬಳಿಕ ಅದೇ ವಾರದಲ್ಲಿ ಇಬ್ಬರು ಬೀಚ್ ಗೆ ತೆರಲಿ ಅಲ್ಲಿ ಪೋಟೋ ತೆಗೆದು ಬಳಿಕ ಆತ ಪೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಹೆದರಿಸಿ ಯುವತಿಯನ್ನು ಬೆಂಗಳೂರು ಮತ್ತು ಕಿನ್ನಿಗೋಳಿಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದು, ಬಳಿಕ ಯುವತಿಯ ನಗ್ನ ಪೋಟೊಗಳನ್ನು ಅವಳ ಮನೆಯವರ ಹಾಗೂ ಸ್ನೇಹಿತರ್ ಮೊಬೈಲ್ ಗೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ.
ಈ ಪೊಟೋಗಳನ್ನು ಡಿಲೀಟ್ ಮಾಡಬೇಕಾದರೆ 1,50,000 ರೂ ಮೊತ್ತವನ್ನು ಬೇಡಿಕೆಯಿಟ್ಟಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 354(ಡಿ), 376, 384, 506, 170, ಮತ್ತು 67(ಎ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಂಧಿತ ವ್ಯಕ್ತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.