ಮಂಗಳೂರು, ಆ 10(DaijiworldNews/MS): ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿರೋಧ ಪಕ್ಷದ ಶಾಸಕರ ಹಕ್ಕು ಚ್ಯುತಿಯಾಗುತ್ತಿದೆ ಎಂದು ಬಿಜೆಪಿ ಮುಖಂಡ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.
ಅವರು ಆಗಸ್ಟ್ 10 ರ ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದ್ವೇಷದ ರಾಜಕೀಯ ಮಾಡುತ್ತಿದೆ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಪಂನ ರಾಜೀವ ಗಾಂಧಿ ಸೇವಾ ಕೇಂದ್ರ ಹಾಗೂ ಪಂಚಾಯತ್ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ತಾಪಂ ಇಒ ಮತ್ತು ಗ್ರಾಪಂ ಪಿಡಿಒರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರ ಸ್ಥಳೀಯ ಆಡಳಿತದಲ್ಲಿ ದ್ವೇಷ ರಾಜಕಾರಣ ಮಾಡುತ್ತಿದೆ. ಅಮಾನತುಗೊಂಡಿರುವ ಅಧಿಕಾರಿಗಳನ್ನು ಮೂರು ದಿನದೊಳಗೆ ಸೇವೆಗೆ ಮರು ಸೇರ್ಪಡೆಗೊಳಿಸದಿದ್ದಲ್ಲಿ ಆ.14ರಂದು ಡಿಸಿ ಕಚೇರಿ ಎದುರು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಉಮಾನಾಥ ಕೋಟ್ಯಾನ್ ಮತ್ತು ರಾಜೇಶ್ ನಾಯ್ಕ್ ಮಾತನಾಡಿದರು.
ಶಾಸಕ ಭರತ್ ಶೆಟ್ಟಿ, ಎಂಎಲ್ಸಿ ಪ್ರತಾಪಸಿಂಹ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.