ಬೈಂದೂರು, ಆ 10 (DaijiworldNews/HR): ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಆಸ್ಪತ್ರೆಯ ಕುಂದುಕೊರತೆ ಪರಿಶೀಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಆಸ್ಪತ್ರೆಯೆಂದರೆ ಮೂಗು ಮುರಿಯುವ ವೈದ್ಯರೇ ಇರುವ ಈಗಿನ ಕಾಲದಲ್ಲಿ ಕೆಲವೊಂದು ಆಸ್ಪತ್ರೆಯಲ್ಲಿ ಉತ್ತಮ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ಗ್ರಾಮೀಣ ಭಾಗದ ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಂಡ್ಲೂರು, ಸೇರಿದಂತೆ ಸುತ್ತಲಿನ ಗ್ರಾಮಗಳಿಂದ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುತ್ತಿರುವ ಬಗ್ಗೆ ವಿಚಾರಿಸಿದರು. ಆಸ್ಪತ್ರೆಯ ವ್ಯವಸ್ಥೆ, ಸಿಬ್ಬಂದಿ ಕೊರತೆ,ಪಿಠೋಪಕರಣ, ಮೂಲಸೌಕರ್ಯಗಳ ಬಗ್ಗೆ ಸಿಬ್ಬಂದಿಗಳ ಜೊತೆ ಚರ್ಚಿಸಿದರು.
ನಂತರ ಕಾವ್ರಾಡಿ ಗ್ರಾಮ ಪಂಚಾಯತ್ಗೆ ಪ್ರಥಮ ಭಾರಿಗೆ ಭೇಟಿ ನೀಡಿ ನೂತನ ಗ್ರಾಮ ಪಂಚಾಯತ್ ಕಟ್ಟಡ ಬಗ್ಗೆ ಪಂಚಾಯತ್ ಸದ್ಯಸರ ಜೊತೆ ಚರ್ಚಿಸಿದ್ದಾರೆ.
ಈ ಸಂದರ್ಭದಲ್ಲಿ ಸಾಮ್ರಾಟ್ ಶೆಟ್ಟಿ, ದಿನೇಶ್ ಆಚಾರ್ಯ, ವಿಜಯ ಪುತ್ರನ್, ಪ್ರೇಮಾನಂದ್ ಶೆಟ್ಟಿ, ಪಕ್ಷದ ಪ್ರಮುಖರು ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಆಸ್ಪತ್ರೆ ಸಿಬ್ಬಂದಿ ವರ್ಗದವರು, ಮತ್ತಿತರು ಉಪಸ್ಥಿತರಿದ್ದರು.