ಪುತ್ತೂರು, ಆ 11 (DaijiworldNews/AK): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಳನ್ನು ಪರಿಶೀಲಿಸಿದ.
ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡುತ್ತಿರುವ ಕುರಿತು ರೋಗಿಗಳೊಂದಿಗೆ ಸಚಿವರು ಮಾತನಾಡಿದರು.ಈ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.