ಉಡುಪಿ,ಏ 06 (MSP): ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಮೃತ್ ಶೆಣೈ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿದೆ.
ಪಕ್ಕಾ ಕಾಂಗ್ರೆಸ್ಸಿಗನಾಗಿರುವ ಅಮೃತ್ ಶೆಣೈ ಅವರು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರನಾಗಿ, ಮೈತ್ರಿ ಪಕ್ಷದ ಅಧಿಕೃತ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವಿರುದ್ದ , ವಜ್ರದ ಚಿನ್ನೆಯೊಂದಿಗೆ ಸ್ಪರ್ಧಿಸುತ್ತಿರುವ ಕಾರಣದಿಂದ ಕಾಂಗ್ರೇಸ್ -ಜೆಡಿಎಸ್ ಮೈತ್ರಿ ಸರಕಾರಕ್ಕೆ ಮಗ್ಗುಲ ಮುಳ್ಳಾಗಿ ಕಾಡಿದ್ದರು.
ಏ.6ರ ಶನಿವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಹಪೀಉಲ್ಲಾ ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಕೆಪಿಸಿಸಿ ಅಧ್ಯಕ್ಷರ ನಿರ್ದೇಶನ ಮೇರೆಗೆ ಮೈತ್ರಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ದ ಸ್ಪರ್ಧಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಸಲುವಾಗಿ 6 ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇವರಲ್ಲದೆ ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಸ್ಪರ್ಧಿಸಿದ್ದ ಕಾನುಲ್ ಹಖ್ ಬುಖಾರಿ ಅವರನ್ನು ಉಚ್ಚಾಟನೆ ಮಾಡಲಾಗಿದೆ.