ಮಂಗಳೂರು, ಎ08(SS): ಈ ಬಾರಿ ನಳಿನ್ ಕುಮಾರ್ ಕಟೀಲು ಎರಡು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸ್ವತ್ಛ ಜನಪರ ಆಡಳಿತ ಹಾಗೂ ಈ ಹಿಂದಿನ ಯುಪಿಎ ಸರಕಾರ ಮತ್ತು ರಾಜ್ಯದ ಸಮ್ಮಿಶ್ರ ಸರಕಾರದ ದುರಾಡಳಿತವನ್ನು ತುಲನೆ ಮಾಡಿ ಈ ಬಾರಿ ಮತ್ತೂಮ್ಮೆ ಮೋದಿಯನ್ನು ಜನರು ಆರಿಸ ಬಯಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರವೂ ಕೂಡ ನೇರವಾಗಿ ಜನತೆಗೆ ಸೌಲಭ್ಯಗಳನ್ನು ಕಲ್ಪಿಸಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಇಂದು ಉಜ್ವಲದಂಥ ಯೋಜನೆ ಮನೆ ಮನೆಗೆ ಮುಟ್ಟಿದೆ ಎಂದು ಹೇಳಿದ್ದಾರೆ.
ಈ ಬಾರಿ ನಳಿನ್ ಕುಮಾರ್ ಕಟೀಲು ಎರಡು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ. ಸೂರಿಲ್ಲದವರಿಗೆ ಸೂರು ಒದಗಿಸಲಾಗಿದೆ. ಸ್ವೋದ್ಯೋಗಕ್ಕಾಗಿ, ಕಿರು ಉದ್ಯಮ ಸ್ಥಾಪನೆ ಸಹಿತ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಜನತೆ ಕಂಡಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು, ಪ್ರಚಾರದ ವೇಳೆ ಎಲ್ಲೆಡೆ ಮೋದಿ ಸರಕಾರದ ಆಡಳಿತ ಬಗ್ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜನರ ಒಲವು ಬಿಜೆಪಿ ಪರ ಇದೆ. ಮೋದಿ ಬಂದರೆ ದೇಶ ಸುರಕ್ಷತೆಯಿಂದ ಇರುತ್ತದೆ ಎಂಬ ಭಾವನೆ ಜನರಲ್ಲಿದೆ. ಹೀಗಾಗಿ ಮತ್ತೂಮ್ಮೆ ಬಿಜೆಪಿ ಆಡಳಿತ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.